ಐ.ಎ.ಎಸ್, ಕೆ.ಎ.ಎಸ್ ಪರೀಕ್ಷೆ ತೆಗೆದುಕೊಂಡವರಿಗೆ ಗುಡ್ ನ್ಯೂಸ್…!

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ಆಸಕ್ತ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ಆಸಕ್ತ ಸ್ಪರ್ಧಾರ್ಥಿಗಳು ಮಾ.29 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ತಿಳಿಸಿದ್ದಾರೆ.

ಅರ್ಜಿಸಲ್ಲಿಸಲು ಅವಧಿ ವಿಸ್ತರಣೆ:

ಧಾರವಾಡದ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದವರಿಗೆ ವಸತಿ ಯೋಜನೆಯಡಿಯಲ್ಲಿ ಸೌಲಭ್ಯ ಕಲ್ಪಿಸಲು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಫಲಾನುಭವಿಗಳು ಜಿಲ್ಲಾ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಗೆ ಸಲ್ಲಿಸಬಹುದು. ಅರ್ಜಿಗಳ ನಮೂನೆಯನ್ನು http://adcl.karnataka.gov.in ಪ್ರಕಟಿಸಲಾಗಿದ್ದು, ಅರ್ಜಿಯನ್ನು ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕ ಕಚೇರಿಯ ದೂರವಾಣಿ ಸಂಖ್ಯೆ: 0836-2447151 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment